ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯಬಾರದು- ಮಾಜಿ ಸಿಎಂ ಸಿದ್ದರಾಮಯ್ಯ… ಬೆಂಗಳೂರು,ಜ,22,2020(..): ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬುವವನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯ ಸಂಗತಿಯನ್ನ ಬಯಲಿಗೆಳೆಯಬೇಕು. ಆತನನ್ನ ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಇಂದು ಬೆಳಿಗೆ ಬೆಂಗಳೂರು ಪೊಲೀಸರ ಎದುರು ಶರಣಾಗಿದ್ದನು. ನಂತರ ಇದೀಗ ಆತನನ್ನ ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. : -- --- - -.