ಇಂದಿನಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿ… ಮಂಗಳೂರು,ಜ,22,2020(..): ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಬ್ರಹ್ಮಕಲಶೋತ್ಸವ ಆರಂಭವಾಗಿದೆ. ಇಂದಿನಿಂದ ಫೆಬ್ರುವರಿ 3 ವರೆಗೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಅಂಗವಾಗಿ ಇಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಮಾರಂಭದ ಉಗ್ರಾಣ ಮುಹೂರ್ತ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ದುರ್ಗಪರಮೇಶ್ವರಿ ದೇವಸ್ಥಾನದ ಅರ್ಚಕರಾದ ವಾಸುದೇವ ಅಸ್ರಣ್ಣ, ಲಕ್ಷ್ಮಿ ನಾರಾಯಣ ಅಸ್ರಣ್ಣ ಸೇರಿ ಮತ್ತಿತರರು ಉಪಸ್ಥಿತರಿದ್ದರು. ಇಂದಿನಿಂದ ಜ.31ರವರೆಗೆ ಪ್ರತಿದಿನ ಸಂಜೆ 5ಕ್ಕೆ ಧಾರ್ಮಿಕ ಸಭೆಗಳು ನಡೆಯಲಿದ್ದು, ಜ.24ರಂದು ಸುವರ್ಣ ಧ್ವಜ ಪ್ರತಿಷ್ಠೆ ಮತ್ತು 30ರಂದು ಬ್ರಹ್ಮಕಲಶಾಭಿಷೇಕವು ನೆರವೇರಲಿದೆ. : - - - - –