ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ. ನವದೆಹಲಿ, ಮಾರ್ಚ್​ 8,2024(..):ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವರಾತ್ರಿ ಹಬ್ಬದ ದಿನವೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸಿಹಿಸುದ್ದಿ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. : - - – .100-