ಹುಣಸೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ: ಮಾಜಿ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಭೆ…. ಮೈಸೂರು,ಜ,2020(..): ಹುಣಸೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ ಆಯೋಜಿಸಿದ್ದು ನಗರದ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ, ಮಾಜಿ ಸಂಸದ ಧೃವನಾರಾಯಣ್, ಎಂಎಲ್ ಸಿ ಧರ್ಮಸೇನಾ, ಮಾಜಿ ಎಂಎಲ್ಸಿ ಪುಟ್ಟಸಿದ್ದಶೆಟ್ಟಿ, ಶಾಸಕರಾದ ಮಂಜುನಾಥ್, ಅನಿಲ್ ಚಿಕ್ಕಮಾಧು, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಸೇರಿ ಇತರರು ಉಪಸ್ಥಿತರಿದ್ದಾರೆ. ಹುಣಸೂರು ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಹ ಉಪಸ್ಥಿತರಿದ್ದಾರೆ. ಸಭೆಯಲ್ಲಿ ಮಾತನಾಡಿದ ಹೆಚ್.ಸಿ ಮಹದೇವಪ್ಪ, ಹುಣಸೂರಿನಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ದುಡಿದಿದ್ದಾರೆ. ಎಲ್ಲರ ಪರಿಶ್ರಮದಿಂದ 39ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇವೆ. ಜಾತಿ ಬೆಂಬಲವಿಲ್ಲದೇ ಸಿದ್ದರಾಮಯ್ಯನವರ ಅಭಿವೃದ್ಧಿ ಕೆಲಸಗಳಿಂದ ಕ್ಷೇತ್ರ ನಮ್ಮದಾಗಿದೆ. ಮಂಜುನಾಥ್ ರವರು ಕ್ಷೇತ್ರದಲ್ಲಿ ಮಾಡಿರುವ ಕೆಲಸ ಗೆಲವಿಗೆ ಕಾರಣವಾಗಿದೆ. ವಿಶ್ವನಾಥ್ ಗೆ ಜಾತಿ ಬೆಂಬಲವಿದ್ರೂ ಕೇವಲ 300ಮತಗಳಿರುವ ಸಮುದಾಯದ ಮಂಜುನಾಥ್ ಗೆದ್ದಿದ್ದಾರೆ. ಜನ ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿದ್ದಾರೆ. ಜಿ.ಪಂ ಹಾಗೂ ತಾ.ಪಂ ಅಧ್ಯಕ್ಷರು ಹಾಗೂ ಸದಸ್ಯರು ಕಡ್ಲೆಪುರಿ ತಿನ್ಕೊಂಡು ಕೆಲಸ ಮಾಡಿದ್ದಾರೆ. ಈ ರೀತಿಯ ಪಕ್ಷನಿಷ್ಠೆ ಇದ್ರೆ ಗೆಲುವು ಸುಲಭ ಎಂದು ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಹೇಳಿದ್ದಾರೆ. : --- – .