ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಶ್ವಾನ ಜ್ಯಾಕ್ ನಿಂದ ತೀವ್ರ ತಪಾಸಣೆ… ಮಂಗಳೂರು,ಜ,21,2020(..): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರ ಏರ್ ಪೋರ್ಟ್ ನಲ್ಲಿ ಇಂದು ಸಹ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿನ ಏರ್ ಪೋರ್ಟ್ ನಲ್ಲಿ ಸಿಐಎಸ್ ಎಫ್ ನ ಶ್ವಾನ ಜ್ಯಾಕ್ ನಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮೂರು ತಂಡಗಳನ್ನ ರಚಿಸಲಾಗಿದ್ದು, ಬಾಂಬ್ ಇಟ್ಟ ವ್ಯಕ್ತಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಇನ್ನು ಆಟೋಚಾಲಕನನ್ನ ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಬೆಂಗಳೂರು ಎನ್ ಐಎ ತಂಡ ಮಂಗಳೂರಿಗೆ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಕಲೆ ಹಾಕಿದ್ದಾರೆ. ದೆಹಲಿ ಎನ್ ಐಎ ತಂಡ ಸಹ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. : - –- -