ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಆಯ್ಕೆ…. ಬೆಂಗಳೂರು,ಜ,16,2020(..): ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಔಪಚಾರಿಕ ಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವಿರೋಧವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರು. ಸಾಂಸ್ಥಿಕ ಚುನಾವಣಾಧಿಕಾರಿ ಅಶ್ವಥ್ ನಾರಾಯಣ್ ಗೌಡ ಮತ್ತು ಸಹ ಚುನಾವಣಾಧಿಕಾರಿ ಹಾಲಪ್ಪ ಆಚಾರ್ ಈಬಗ್ಗೆ ಘೋಷಣೆ ಮಾಡಿದರು. ನಳೀನ್ ಕುಮಾರ್ ಕಟೀಲ್ 2023ರ ಜನವರಿ 16ರವರೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಅಧ್ಯಕ್ಷನಾಗಿ ಆಯ್ಕೆಯಾದಾಗ ಕೆಲ ಸವಾಲುಗಳಿದ್ದವು. ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದೇನೆ. ಸ್ಥಳೀಯ ಸಂಸ್ಥೆಯ ಚುನಾವಣೆ, ಬಿಬಿಎಂಪಿ ಮೇಯರ್ ಚುನಾವಣೆ ಹಾಗೂ ಉಪಚುನಾವಣೆಯಲ್ಲಿ ಯಶಸ್ಸು ಗಳಿಸಿದ್ದೇವೆ ಎಂದರು. : - – –-