ಮತ್ತೆ ದಲಿತ ಸಿಎಂ ಕೂಗು: ಸಚಿವ ಸತೀಶ್ ಜಾರಕಿಹೋಳಿ ಪ್ರತಿಕ್ರಿಯೆ ಏನು..? ಬೆಳಗಾವಿ,ಮಾರ್ಚ್,7,2024(..):ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಪ್ರಸ್ತಾಪವಾಗಿದ್ದು, ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಇದು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ವಿಷಯವಲ್ಲ ಮತ್ತು ಚುನಾವಣಾ ಸಮಯದಲ್ಲಿ ಇದನ್ನು ಪ್ರಸ್ತಾಪಿಸಬಾರದಿತ್ತು ಎಂದ ಸತೀಶ್ ರಾಜಕೀಯದಲ್ಲಿ ಕುತಂತ್ರ ಹೊಸದಲ್ಲ, ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ದಲಿತ ಸಿಎಂ ಕೂಗು ಇಂದು, ನಿನ್ನೆದಲ್ಲ. ಕಾಂಗ್ರೆಸ್‌ ನಲ್ಲಿ ಮಾತ್ರವಲ್ಲ ಬಿಜೆಪಿ, ಜೆಡಿಎಸ್‌ ನಲ್ಲೂ ದಲಿತ ಸಿಎಂ ಕೂಗು ಇದೆ. ಆದರೆ ಇದುವರೆಗೆ ದಲಿತರು ಯಾವುದೇ ಪಕ್ಷದಲ್ಲಿ ಸಿಎಂ ಆಗಲು ಸಾಧ್ಯವಾಗಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಕಳೆದ 20 ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ, 2013ರಲ್ಲಿ ಡಾ. ಜಿ. ಪರಮೇಶ್ವರ್‌ ಅವರು ಸಿಎಂ ಆಗಬೇಕೆಂಬ ಕೂಗು ಇತ್ತು. ಆದರೆ ಅವರಿಬ್ಬರಿಗೂ ಸಿಎಂ ಆಗುವ ಭಾಗ್ಯ ಸಿಗಲಿಲ್ಲ. ನಾನು ಅನೇಕ ಸಮಾವೇಶಗಳಲ್ಲಿ ದಲಿತರು ಸಿಎಂ ಆಗಲೇಬೇಕೆಂದು ಹೇಳಿದ್ದೇನೆ ಎಂದರು. : -- - -