ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಚರ್ಚೆ…. ನವದೆಹಲಿ,ಜ,14,2020(..): ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾದರು. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದರು. ನಂತರ ಕಾಂಗ್ರೆಸ್ ನಾಯಕ ಅಹ್ಮದ್ ಪಾಟೀಲ್ ಅವರನ್ನ ಭೇಟಿಯಾಗಿದ್ದರು. ಇದೀಗ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ನಿವಾಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ಸೋನಿಯಾ ಗಾಂಧಿ ಜತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಜಮೀರ್ ಅಹ್ಮದ್ ಖಾನ್, ರಾಘವೇಂದ್ರ ಹಿಟ್ನಾಳ್, ಐವಾನ್ ಡಿಸೋಜಾ, ಭೀಮಾನಾಯ್ಕ್ ಉಪಸ್ಥಿತರಿದ್ದಾರೆ. : - - - - -