ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು: ಮೂವರಿಗೆ ಗಂಭೀರ ಗಾಯ… ಮೈಸೂರು,ಜ,14,2020(..): ಎರಡು ಕಾರುಗಳ ನಡುವೆ ಡಿಕ್ಕಿ‌ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಹುಲ್ಲೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಿಂದ ಹುಣಸೂರು ಕಡೆಗೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಸ್ವಿಫ್ಟ್ ಕಾರು ಡಿವೈಡರ್ ಹಾರಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಬಿಳಿಕೆರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -- –- - – .