ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪೊಲೀಸರ ವಶಕ್ಕೆ… ಬಳ್ಳಾರಿ,ಜ,13,2020(..): ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ವೇಳೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ನಗರದ ಹೊರವಲಯ ಹೊಸಪೇಟೆ ರಸ್ತೆಯ ಕಂಟ್ರಿಕ್ಲಬ್ ಬಳಿ ಶಾಸಕ ಜಮೀರ್ ಅಹ್ಮದ್ ಖಾನ್ ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆ ಸೋಮಶೇಖರ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಜಮೀರ್ ಹೇಳಿದ್ದರು. ಅಂತೆಯೇ ಇಂದು ಜಮೀರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹ್ಮದ್ ಖಾನ್ ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರಣಿ ನಡೆಸಲು ಪೊಲೀಸರ ಬಳಿ ಜಮೀರ್ ಅನುಮತಿ ಕೇಳಿದ್ದರು. ಆದರೆ ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ ಜಮೀರ್ ರನ್ನ ಬಂಧಿಸಲಾಗಿದೆ. : -- - - – .