ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ… ಬೆಂಗಳೂರು,ಜ,11,2020(..): ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ. ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ(88) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಿದಾನಂದಮೂರ್ತಿ ಆಸ್ಪತ್ರೆಯಲ್ಲಿ ಕೊನಯುಸಿರೆಳೆದಿದ್ದಾರೆ. ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ‌. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ತಂದುಕೊಡಲು ಅವರು ಹೋರಾಟ ಅವಿಸ್ಮರಣೀಯ. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನುಡಿದರು.ಎಂಎಲ್ ಸಿ ಆಗುವಂತೆ ಕೇಳಿಕೊಂಡಿದ್ದೆ. ಆದ್ರೆ ಬೇಡ ಎಂದಿದ್ದರು… ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ ವಿಧಾನಪರಿಷತ್ ಸದಸ್ಯರಾಗಿ ಅಂತ ಕೇಳಿಕೊಂಡಿದ್ದೆ. ನನಗೆ ವಯಸ್ಸಾಗಿದೆ ಬೇರೆಯವರಿಗೆ ಮಾಡಿ ಅಂತ ಚಿದಾನಂದಮೂರ್ತಿ ಹೇಳಿದ್ದರು,” ಎಂದು ಸಿಎಂ ಬಿಎಸ್​ವೈ ಚಿದಾನಂದಮೂರ್ತಿಯವರ ಜೊತೆಗಿನ ನೆನಪು ಬಿಚ್ವಿಟ್ಟರು. : ’-- – - .