ಅನುಚಿತ ವರ್ತನೆ ಹಾಗೂ ವೇತನ ನೀಡದ ಆರೋಪ: ಗಾರ್ಮೆಂಟ್ಸ್ ಮಾಲೀಕರ ವಿರುದ್ದ ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ… ಮೈಸೂರು,ಜ,9,2020(..): ವೇತನ ನೀಡದೆ ಮಹಿಳಾ ನೌಕರರೊಂದಿಗೆ ಅನುಚಿತ ವರ್ತನೆ ತೋರಿದ್ದಾರೆಂದು ಆರೋಪಿಸಿ ಮೈಸೂರಿನಲ್ಲಿ ಗಾರ್ಮೆಂಟ್ಸ್ ಮಾಲೀಕರ ವಿರುದ್ದ ಮಹಿಳಾ ನೌಕರರು ಪ್ರತಿಭಟನೆ ನಡೆಸಿದರು. ಮೇಟಗಳ್ಳಿ ಜಯದೇವ ನಗರದಲ್ಲಿರುವ ಸಾಯಿ ಗಾರ್ಮೆಂಟ್ಸ್ ಮಾಲೀಕರ ವಿರುದ್ಧ ಗಾರ್ಮೆಂಟ್ಸ್ ನ ಮಹಿಳಾ ನೌಕರರು ಪ್ರತಿಭಟನೆ ನಡೆಸಿದರು. ಸಂಬಳ ಕೇಳಿದ್ದಕ್ಕೆ ಸಾಯಿ ಗಾರ್ಮೆಂಟ್ಸ್ ಮಾಲೀಕ ಅನುಚಿತ ವರ್ತನೆ ತೋರಿದ್ದಾರೆ ಎಂದು ಕಾರ್ಖಾನೆ ಆಡಳಿತ ಮಂಡಳಿ ವಿರುದ್ದ 300ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಮೇಟಗಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. : - – - - .