ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಹೆಸರನ್ನ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿ- ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ…. ಬೆಂಗಳೂರು,ಜ,9,2020(..): ನಟಸಾರ್ವಭೌಮ, ಕರ್ನಾಟಕ ರತ್ನ, ಪದ್ಮಭೂಷಣ ಡಾ ರಾಜ್ ಕುಮಾರ್ ಅವರ ಹೆಸರನ್ನ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಲಾಯಿತು. ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಮತ್ತು ಅಖಿಲ ಕರ್ನಾಟಕ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಗಳ ಪದಾಧಿಕಾರಿಗಳು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಡಾ. ರಾಜ್ ಕುಮಾರ್ ಹೆಸರನ್ನ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಿದರು. ಹಾಗೆಯೇ ಚಾಮರಾಜನಗರ ತಾಲ್ಲೂಕಿಗೆ ಡಾ ರಾಜ್ ಕುಮಾರ್ ತಾಲ್ಲೂಕು ಎಂದು ನಾಮಕರಣ ಮಾಡಬೇಕು. ಬೆಂಗಳೂರಿನ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಡಾ ರಾಜ್ ಕುಮಾರ್ ನಿಲ್ದಾಣ ಎಂದು ನಾಮಕರಣ ಮಾಡಬೇಕು ಜತೆಗೆ ಚಲನಚಿತ್ರ ರಂಗದಲ್ಲಿ 34 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದರು. : – . – – - -