ಆದೇಶ ಉಲ್ಲಂಘಿಸಿ ಕರ್ತವ್ಯಕ್ಕೆ ಗೈರಾದ್ರೆ ಶಿಸ್ತುಕ್ರಮ-ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಡಿಸಿಎಂ ಲಕ್ಷ್ಮಣ್ ಸವದಿ ಎಚ್ಚರಿಕೆ… ಬೆಂಗಳೂರು,ಜ,7,2020(..): ನಾಳೆ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಹಿನ್ನೆಲೆ ನಾಳಿನ ಬಂದ್ ನಲ್ಲಿ ಪಾಲ್ಗೊಳ್ಳದಂತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಲಕ್ಷ್ಮಣ್ ಸವದಿ, ನಾಳೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಆದೇಶ ಉಲ್ಲಂಘಿಸಿ ಕರ್ತವ್ಯಕ್ಕೆ ಗೈರಾದ್ರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರುತ್ತದೆ ಎಂದು ತಿಳಿಸಿದ್ದಾರೆ. ಹಾಗೆಯೇ ಬಂದ್ ನಿಂದ ಸರ್ಕಾರಿ ಸಂಸ್ಥೆಗಳಿಗೆ ನಷ್ಟವಾಗುತ್ತದೆ. ಹೀಗಾಗಿ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸೂಚನೆ ನೀಡಲಾಗಿದೆ. ಇನ್ನು ಬಂದ್ ಹೆಸರಿನಲ್ಲಿ ಗಲಭೆ ಸೃಷ್ಠಿಸಿದರೇ ಕಠಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ. : - - - -