ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜ.22 ರಂದು ಗಲ್ಲು ಶಿಕ್ಷೆ… ನವದೆಹಲಿ,ಜ,7,2020(..): ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲಿಗೇರಿಸಲು ನವದೆಹಲಿಯ ಪಾಟಿಯಾಲ ಹೌಸ್ ಕೋರ್ಟ್ ಆದೇಶ ನೀಡಿದೆ. ಪ್ರಕರಣದ ಅಪರಾಧಿಗಳಾದ ಅಕ್ಷಯ್ ,ಮುಖೇಶ್, ವಿನಯ್ ಪವನ್ ಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಪಟಿಯಾಲ ಹೌಸ್ ಕೋರ್ಟ್ ಆದೇಶಿಸಿದ್ದು ಡೆತ್ ವಾರೆಂಟ್ ಜಾರಿಗೊಳಿಸಿದೆ. ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಲು ಆದೇಶ ಹೊರಡಿಸಿದೆ. ಪ್ರಕರಣ ನಡೆದ ಏಳುವರ್ಷಗಳ ಬಳಿಕ ಅಂತಿಮ ತೀರ್ಪು ಹೊರಬಿದ್ದಿದೆ. ಇಂದು ನಾಲ್ವರು ಅಪರಾಧಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ಮಾಡಿದರು.ಸುಪ್ರೀಂಕೋರ್ಟ್ ಎಲ್ಲ ಅಪರಾಧಿಗಳ ಮರುಪರಿಶೀಲನಾ ಅರ್ಜಿಯನ್ನೂ ವಜಾ ಮಾಡಿತ್ತು. ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಎಂದು ಡಿ.18ರಂದು ತೀರ್ಪು ನೀಡಿತ್ತು. ಇದಾದ ಬಳಿಕ ನಿರ್ಭಯಾ ಪೋಷಕರು, ಕೂಡಲೇ ಡೆತ್ ವಾರಂಟ್​ ಜಾರಿ ಮಾಡುವಂತೆ ದೆಹಲಿ ಪಟಿಯಾಲಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. : – - – . 22 –