ಆಟೋ ಮತ್ತು ದ್ವಿಚಕ್ರವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ: ಇಬ್ಬರು ಸಾವು… ಬೆಂಗಳೂರು,ಜ,6,2020(..): ಆಟೋ ಮತ್ತು ದ್ವಿಚಕ್ರವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೊಟ್ಟಿಗೆ ಪಾಳ್ಯ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಭೈರಪ್ಪ ಸೇರಿ ಇಬ್ಬರು ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿದೆ. ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ಸ್ಥಳಖ್ಕೆ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - - – -- - .