ತೀವ್ರ ಕುತೂಹಲ ಕೆರಳಿಸಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ…. ಬೆಂಗಳುರು,ಜ,5,2020(..): ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನ ಕಾವೇರಿ ನಿವಾಸದಲ್ಲಿ ಭೇಟಿಯಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದು ಈ ಹಿನ್ನೆಲೆ ಸಿದ್ಧರಾಮಯ್ಯ ಜತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ತೆರವಾದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಹೈಕಮಾಂಡ್ ಚರ್ಚೆ ನಡೆಸಿರುವ ಬೆನ್ನಲ್ಲೇ ಡಿಕೆಶಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಸಿದ್ಧರಾಮಯ್ಯ ಮಾಜಿ ಸಚಿವ ಎಂ.ಬಿ ಪಾಟೀಲ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. : - – - –-