ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಪ್ರಧಾನಿ ಮೋದಿ…. ತುಮಕೂರು,ಜ,2,2020(..): ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದರು. ನವದೆಹಲಿಯಿಂದ ಬೆಂಗಳೂರಿನ ಯಲಹಂಕ ಏರ್ ಬೇಸ್ ಗೆ ಆಗಮಿಸಿದ ಪ್ರಧಾನಿ ಮೋದಿ ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಆಗಮಿಸಿದರು. ತುಮಕೂರು ವಿವಿ ಹೆಲಿಪ್ಯಾಡ್ ನಿಂದ ಸಿದ್ದಗಂಗಾ ಮಠಕ್ಕೆ ಕಾರಿನಲ್ಲಿ ಆಗಮಿಸಿದರು. ಪ್ರಧಾನಿ ಮೋದಿ ಜತೆ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದಾರೆ. ಇನ್ನು ಪ್ರಧಾನಿ ಮೋದಿ ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ಪೂಜೆ ಸಲ್ಲಿಸಿ ದರ್ಶನ ಪಡೆದರು. : –- - - - ’