ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣಕ್ಕೆ ಟ್ವಿಟ್ಟರ್ ನಲ್ಲಿ ಕಿಡಿಕಾರಿದ ಮಾಜಿ ಸಿಎಂ ಸಿದ್ಧರಾಮಯ್ಯ… ಬೆಂಗಳೂರು,ಜ,2,2019(..): ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಭಾಷಣಕ್ಕೆ ಟ್ವಿಟರ್ ಮೂಲಕ ಕಿಡಿಕಾರಿದ ಮಾಜಿ ಸಿ.ಎಂ.ಸಿದ್ದರಾಮಯ್ಯ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವವಿದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನ ಕೂರಿಸಿಕೊಂಡು ಕೊಳಕು ರಾಜಕೀಯ ಭಾಷಣ ಮಾಡಿದ ನರೇಂದ್ರ ಮೋದಿಯವರೆ, ನಿಮ್ಮನ್ನ ಆ ಪವಿತ್ರ ನೆಲ ಕ್ಷಮಿಸದು ಎಂದು ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದರು. ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಪ್ರಧಾನಿ ಮೋದಿ ಅಲ್ಲಿನ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕಾರ್ಯಕ್ರಮದಲ್ಲಿ ಲಿಂಗೈಕ್ಯ ಶಿವಕುಮಾರ ಶ್ರೀ ಮತ್ತು ಪೇಜಾವರ ಶ್ರೀಗಳನ್ನ ನೆನೆದರು. ಹಾಗೆಯೇ ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸುತ್ತಿರುವ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದರು. : - - – - - – .