ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್. ನವದೆಹಲಿ, ಮಾರ್ಚ್​​ 5,2024(..):ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್​ ಗೆ ಸುಪ್ರೀಂ ಕೋರ್ಟ್​ ಬಿಗ್ ರಿಲೀಫ್ ನೀಡಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ. : - - - – – - .