ಹೆಂಡತಿ ಜೊತೆ ‘ವಿಡಿಯೋ ಕಾಲ್’ ನಲ್ಲಿ ಮಾತನಾಡುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು. ಮೈಸೂರು,ಮಾರ್ಚ್,5,2024(..):ರೈಲಿನಲ್ಲಿ ಸಂಚರಿಸುವಾಗ ಅಥವಾ ರೈಲ್ವೆ ಹಳಿ ಬಳಿ ನಿಂತಾದ ಹೆಚ್ಚು ಜಾಗರೂಕರಾಗಿರುವುದು ಅಗತ್ಯ. ಈ ಮಧ್ಯೆ ಇಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಹೆಂಡತಿಗೆ ವಿಡಿಯೋ ಕಾಲ್ ಮುಖಾಂತರ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಆತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ.ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ. ಬೆಳಿಗ್ಗೆ ಹೆಂಡತಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. ಈ ಕುರಿತು ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - – – -