ಸ್ನೇಹಿತನ ಜತೆ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು… ಹಾಸನ,ಜ,1,2020(..): ಹೊಸ ವರ್ಷಾಚರಣೆ ಹಿನ್ನೆಲೆ ಸ್ನೇಹಿತನ ಜತೆ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮ್ಮನಹಳ್ಳಿ ಗ್ರಾಮದ ಅರುಣ್ ಕುಮಾರ್ (28) ಮೃತಪಟ್ಟ ಯುವಕ. ಹೊಸ ವರ್ಷಾಚರಣೆ ಹಿನ್ನೆಲೆ ಸ್ನೇಹಿತ ನಾಗೇಶ್ ಜತೆ ಅರುಣ್ ಕುಮಾರ್ ಪಾರ್ಟಿ ಮಾಡಲು ತೆರಳಿದ್ದ. ಈ ವೇಳೆ ಅರುಣ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದು ಅರುಣ್ ಕುಮಾರ್ ಶವ ಕಲ್ಲುಕ್ವಾರಿಯ ಹೊಂಡದಲ್ಲಿ ಪತ್ತೆಯಾಗಿದೆ. ಇನ್ನು ಘಟನೆ ಬಳಿಕ ಅರುಣ್ ಕುಮಾರ್ ಸ್ನೇಹತ ನಾಗೇಶ್ ಫೋನ್ ಸ್ವಿಚ್ ಆಫ್ ಆಗಿದ್ದು ಈ ಕುರಿತು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – – – – -