ಶೀಘ್ರವೇ ಸಭೆ ನಡೆಸಿ ಗಡಿವಿವಾದ ಸಂಬಂಧ ಕಾನೂನು ಹೋರಾಟದ ಬಗ್ಗೆ ಚರ್ಚೆ -ಗೃಹ ಸಚಿವ ಬಸವರಾಜ ಬೊಮ್ಮಾಯಿ… ಬೆಂಗಳೂರು,ಜ,1,2020(..): ಕೊಲ್ಹಾಪುರದಲ್ಲಿ ಶಿವಸೇನೆಯಿಂದ ಪುಂಡಾಟಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಶಾಂತಿ ಕಾಪಾಡುವಂತೆ ಬೆಳಗಾವಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಡಿವಿವಾದ ಸಂಬಂಧ ಕಾನೂನು ಹೋರಾಟದ ಬಗ್ಗೆ ಚರ್ಚಿಸುತ್ತೇವೆ. ಸಿಎಂ ಶೀಘ್ರದಲ್ಲೇ ಸಭೆ ಕರೆಯಲಿದ್ದಾರೆ. ಸಭೆ ನಡೆಸಿ ಕಾನೂನಾತ್ಮಕ ಕ್ರಮ ಜರುಗಿಸುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಮಹಾಜನ್ ವರದಿ ಪ್ರಕಾರ ವಿವಾದ ಬಗೆಹರಿದಿದೆ. ಆದರೆ ರಾಜಕೀಯಕ್ಕಾಗಿ ಈಗ ಖ್ಯಾತೆ ತೆಗೆದಿದ್ದಾರೆ ಎಂದು ಹೇಳಿದರು. ಹೊಸ ವರ್ಷಾಚರಣೆ ವೇಳೆ ಕೆಲವರಿಂದ ಅಸಭ್ಯ ವರ್ತನೆ ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. : - - - - - - .