ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರದಿಂದ ಶಾಕ್: ಸಬ್ಸಿಡಿ ರಹಿತ ಎಲ್ ಪಿಜಿ ದರ ಹೆಚ್ಚಳ… ನವದೆಹಲಿ,ಜ,1,2020(..): ಸಬ್ಸಿಡಿ ರಹಿತ ಎಲ್ ಪಿಜಿ ದರ ಹೆಚ್ಚಳ ಮಾಡುವ ಮೂಲಕ ಹೊಸ ವರ್ಷದ ಸಂಭ್ರಮದಲ್ಲಿರುವ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ಶಾಕ್ ನೀಡಿದ್ದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಹೆಚ್ಚಳ ಮಾಡಿದೆ. ಜನವರಿ 1ರಿಂದಲೇ ಜಾರಿಗೆ ಬರುವಂತೆ ದೇಶಾದ್ಯಂತ ಸಬ್ಸಿಡಿ ರಹಿತ ಎಲ್​ಪಿಜಿ ಅಥವಾ ಅಡುಗೆ ಅನಿಲ ದರ ಏರಿಕೆಯಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳಕ್ಕೆ ಕಾಂಗ್ರೆಸ್ ವ್ಯಂಗ್ಯ ವಾಡಿದೆ. ಇದು ಹೊಸ ವರ್ಷಕ್ಕೆ ಪ್ರಧಾನಿ ಮೋದಿ ಅವರ ಗಿಫ್ಟ್. ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ ಭಾಗ್ಯವನ್ನ ಕೇಂದ್ರ ಸರ್ಕಾರ ನೀಡಿದೆ ಎಂದು ಲೇವಡಿ ಮಾಡಿದೆ. : - - - -.