ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಬಿಗಿ ಭದ್ರತೆ: 15 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ… ಬೆಂಗಳೂರು,ಡಿ,31,2019(..): ಹೊಸ ವರ್ಷ ಬರಮಾಡಿಕೊಳ್ಳಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದ್ದು ನೂತನ ವರ್ಷದ ಸಂಭ್ರಮಾಚರಣೆ ಮಾಡಲು ಬೆಂಗಳೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದೆಲ್ಲಡೆ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಸಂಜೆ 4 ಗಂಟೆಯಿಂದ ಬೆಳಿಗ್ಗೆ 8 ಗಂಟೆವರೆಗೆ ಖಾಗಿ ಪಡೆ ಕಟ್ಟಚ್ಚರ ವಹಿಸಲಿದ್ದು ಯಾವುದೇ ಅಹಿತಕರ ನಡೆಯದಂತೆ ನಿಗಾವಹಿಸಲಿದೆ. ಬೆಂಗಳೂರಿನಲ್ಲಿ ಭದ್ರತೆಗಾಗಿ 11 ಮಂದಿ ಡಿಸಿಪಿ, ಎಎಸ್ ಐ ಮತ್ತು ಹೋಮ್ ಗಾರ್ಡ್ಸ್ ಸೇರಿ 15 ಸಾವಿರ ಪೊಲೀಸ್ ಸಿಬ್ಬಂದಿಯನ್ನ ನೇಮಿಸಲಾಗಿದೆ. ಇನ್ನು ಹೈಟೆಕ್ ಹೋಟೆಲ್, ಪಬ್ ಗಳಲ್ಲಿ ಶ್ವಾನದಳ ಪರಿಶೀಲನೆ ನಡೆಸಲಿದೆ. ಈ ಮಧ್ಯೆ ಮಹಿಳೆಯರ ರಕ್ಷಣೆಗಾಗಿ 8 ಕಡೆಗಳಲ್ಲಿ ಸೇಫ್ ಐಲ್ಯಾಂಡ್ ನಿಯೋಜಿಸಲಾಗಿದೆ. ನಗರದಲ್ಲಿ ಇಂದು ರಾತ್ರಿ ಫ್ಲೈಓವರ್ ಬಂದ್ ಮಾಡಲಾಗಿದ್ದು, 4500 ಸಿಸಿ ಕ್ಯಾಮರಾಗಳನ್ನ ಅಳವಡಿಸಲಾಗಿದೆ. : - -: – -15