ಗಡಿ ವಿಚಾರ: ಕರ್ನಾಟಕದ ಒಂದಿಂಚು ಜಾಗವನ್ನು ಬಿಟ್ಟುಕೊಡುವುದಿಲ್ಲ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆಂಗಳೂರು,ಡಿ,30,2019(..): ಕರ್ನಾಟಕದ ಒಂದಿಂಚು ಜಾಗವನ್ನು ಕಬಳಿಸಲು ಯಾರಿಗೂ ಅವಕಾಶ ನೀಡಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಮಹಾರಾಷ್ಟ್ರ ಗಡಿ ವಿಚಾರವಾಗಿ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗಡಿ ವಿಚಾರದಲ್ಲಿ ಶಿವಸೇನೆ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡಿದೆ. ಇದಕ್ಕೆ ನಾವು ಸರಿಯಾದ ಉತ್ತರ ಕೊಡುತ್ತೇವೆ.. ಗಡಿ ಭಾಗದ ಕನ್ನಡಿಗರು ಆತಂಕಕ್ಕೆ ಒಳಗಾಗಬಾರದು. ಶಾಂತಿ ಕಾಪಾಡಬೇಕು. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದರು. ಮಹಾರಾಷ್ಟ್ರ ಕರ್ನಾಟಕ ರಾಜ್ಯಗಳಿಗೆ ಯಾವ ಯಾವ ಪ್ರದೇಶಗಳು ಸೇರಬೇಕು ಎಂಬುದು ಹಿಂದೆಯೇ ನಿರ್ಧಾರವಾಗಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಕರ್ನಾಟಕದ ಒಂದಿಂಚು ಜಾಗವನ್ನು ನಾವು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ, ಕನ್ನಡಿಗರು ಶಾಂತಿಯನ್ನು ಕಾಪಾಡಿ ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದರು. : –- -