‘ವಿಶ್ವ ಸಂತ’ನಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ ಬೆಂಗಳೂರು, ಡಿಸೆಂಬರ್ 29, 2019 (..):ಉಡುಪಿಯಲ್ಲಿ ಕೃಷ್ಣೈಕ್ಯರಾದ ಪೇಜಾವರ ಅಧೋಕ್ಷಜ ಮಠದ ಹಿರಿಯ ಯತಿ ವಿಶ್ವೇಶತೀರ್ಥ ಶ್ರೀಪಾದರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಕಾರ್ಯಾಲಯದಲ್ಲಿ ತಾವು ಶ್ರೀಗಳನ್ನು ಭೇಟಿ ಮಾಡಿದ ಸಂದರ್ಭದ ಎರಡು ಫೊಟೋಗಳನ್ನು ಹಾಕಿಕೊಂಡು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಶ್ವ ಸಂತನಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದ್ದಾರೆ.