ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಇಳಿಮುಖ- ಮಣಿಪಾಲ್ ಕೆಎಂಸಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ…. ಉಡುಪಿ,ಡಿ,28,2019(..): ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಇಳಿಮುಖವಾಗಿದ್ದು ತೀರ ಗಂಭೀರವಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಕೆಎಂಸಿ ಆಸ್ಪತ್ರೆ ವೈದ್ಯರು, ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ. ಶ್ರೀಗಳ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಚಿಂತಾಜನಕ ಸ್ಥಿತಿ ತಲುಪಿದೆ. ಶ್ರೀಗಳ ಪ್ರಜ್ಞಾಹೀನ ಸ್ಥಿತಿ ಮುಂದುವರೆದಿದೆ. ಮೆದುಳು ಕಾರ್ಯನಿರ್ವಹಣೆ ಕ್ಷೀಣಿಸುತ್ತಿದೆ ಎಂದು ತಿಳಿಸಿದ್ದಾರೆ. ಪೇಜಾವರದ ವಿಶ್ವೇಶ್ವರ ತೀರ್ಥ ಶ್ರೀಗಳು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ನ್ಯೂಮೋನಿಯ ಹಾಗೂ ಉಸಿರಾಟದ ತೊಂದರೆಯಿಂದ ದಾಖಲಾಗಿದ್ದರು. ಪೇಜಾವರ ಶ್ರೀಗಳನ್ನು ತುರ್ತು ನಿಗಾಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿಗೆ ಭೇಟಿ ನೀಡಲಿದ್ದಾರೆ. : - - - - -