ಕಾಂಗ್ರೆಸ್ ಸರ್ಕಾರದ ವಿರುದ್ದ 50 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ ಶಾಸಕ ಯತ್ನಾಳ್. ವಿಜಯಪುರ,ಮಾರ್ಚ್​, 4,2024(..):ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 50 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಬಸಗನೌಡ ಪಾಟೀಲ್ ಯತ್ನಾಳ್, ಈ ಸರ್ಕಾರದಲ್ಲಿ 50% ಭ್ರಷ್ಟಾಚಾರ ನಡೆಯುತ್ತಿದೆ. ಶೇ.13ರಷ್ಟು ಕಮಿಷನ್ ಇಲ್ಲದೆ ಗುತ್ತಿಗೆದಾರರಿಗೆ ಎನ್‌ಒಸಿ ನೀಡುತ್ತಿಲ್ಲ. ಎಲ್ಲವೂ ಸೇರಿದರೆ ಶೇಕಡಾ 50ರಷ್ಟು ಕಮಿಷನ್ ಗೆ ಬಂದು ನಿಲ್ಲುತ್ತದೆ. ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡುತ್ತಿದ್ದರು. ಆದರೆ ಇವರು 50 ಪರ್ಸೆಂಟ್ ಕಮಿಷನ್​ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನು ವಿಜಯಪುರ ಲೋಕಸಭಾ ಚುನಾವಣೆ ಟಿಕೆಟ್ ಯಾರಿಗೆ ನೀಡಿದರೂ ನಾವು ಕೆಲಸ ಮಾಡುತ್ತೇವೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡೋದು ನಮ್ಮ ಗುರಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. : – - – -50 .