ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕ್ರಮ ಕೈಗೊಳ್ಳಲಿ- ಮಾಜಿ ಸಚಿವ ಜಿ.ಟಿ ದೇವೇಗೌಡ ಹೇಳಿಕೆ… ಮೈಸೂರು,ಡಿ,27,2019(..): ರಾಜ್ಯದಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡುವವರ ವಿರುದ್ದ ಕ್ರಮದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಜಿ,ಟಿ ದೇವೇಗೌಡರು, ಇಂತವರ ವಿರುದ್ದ ಕ್ರಮ ಕೈಗೊಳ್ಳುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಜಿ.ಟಿ ದೇವೇಗೌಡರು, ಪ್ರತಿಭಟನೆ ಪ್ರತಿಯೊಬ್ಬ ನಾಗರೀಕನ ಹಕ್ಕು. ಆದರೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಗದಂತೆ ನೋಡಿಕೊಳ್ಳಬೇಕು. ಶಾಂತಿಯುತ ಪ್ರತಿಭಟನೆಯನ್ನ ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಾಗೆಯೇ ಸಾರ್ವಜನಿಕರ ಆಸ್ತಿ ಪಾಸ್ತಿ ನಾಶ ಮಾಡುವವರ ವಿರುದ್ದ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕ್ರಮ ಕೈಗೊಳ್ಳಲಿ ಎಂದು ಜಿ.ಟಿ ದೇವೇಗೌಡರು ತಿಳಿಸಿದರು. : –- – – - -