ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…. ಬೆಂಗಳೂರು,ಡಿ,26,2019(..): ಎಸ್ ಎಸ್‌ಎಲ್ ಸಿ ಮತ್ತು : ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಇನ್ಮುಂದೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಹೌದು ಈ ಬಗ್ಗೆ ಶಿಕ್ಷಣ ಸುರೇಶ್ ಕುಮಾರ್ ಟ್ವಿಟ್ ಮಾಡಿದ್ದು, ಶಿಕ್ಷಣ ಇಲಾಖೆಯಿಂದ ನಡೆಸುವ “ಸಂವೇದನಾ” ಫೋನ್-ಇನ್ ಕಾರ್ಯಕ್ರಮದಲ್ಲಿ ಬಂದ ಮನವಿಗಳ ಆಧಾರದ ಮೇಲೆ ಕಳೆದ ವರ್ಷದ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ‌ಪಡೆದಿರುವ ವಿದ್ಯಾರ್ಥಿಗಳ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ಮೂಲಕ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. : - – –-