ಖಾಸಗಿ ಎಫ್​ಎಸ್​ಎಲ್​ ವರದಿ ಗಣನೆಗೆ ತೆಗೆದುಕೊಳ್ಳಲ್ಲ: ಬಿಜೆಪಿಗೆ ಗೃಹಸಚಿವ ಡಾ.ಜಿ ಪರಮೇಶ್ವರ್ ಟಾಂಗ್. ​​ ಬೆಂಗಳೂರು, ಮಾರ್ಚ್​​,4,2024(..):ಪಾಕ್ ಪರ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆ ನೀಡಿರುವ ಎಫ್​ಎಸ್​ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಬಿಜೆಪಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಸರ್ಕಾರದ ಎಫ್​ಎಸ್​ಎಲ್​, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡವಾದರೆ ತಪ್ಪಿತಸ್ಥರ ವಿರುದ್ದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್​ ವಿಚಾರ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಭೆ ಮಾಡಿ ಈಗಾಗಲೇ ಎಲ್ಲವನ್ನೂ ಹೇಳಿದ್ದೇನೆ. ಕೆಲ ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್​ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್​ಎಸ್ ​​ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂದು ಎಲ್ಲವನ್ನೂ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು. : - - - – –.