ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದಾರೆಂದು ಸಾಬೀತಾದ್ರೆ ರಾಜಕೀಯ ನಿವೃತ್ತಿ- ಸಿಎಂ ಸಿದ್ದರಾಮಯ್ಯ. ಬೆಂಗಳೂರು,ಮಾರ್ಚ್,4,2024(..):ನನ್ನ ಸೇವಾವಧಿಯಲ್ಲಿ ಗುತ್ತಿಗೆದಾರರಿಂದ 5 ಪೈಸೆ ಕಮಿಷನ್ ಪಡೆದಿಲ್ಲ. ಒಂದು ವೇಳೆ ಕಮಿಷನ್ ಪಡೆದಿರುವುದು ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಬೆಂಗಳೂರಿನಲ್ಲಿ ನಡೆದ ಗುತ್ತಿಗೆದಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013ರಿಂದ 2018ರವರೆಗೆ ಮೊದಲ ಬಾರಿಗೆ ರಾಜ್ಯದ ಸಿಎಂ ಆಗಿದ್ದೆ. 2023ರ ಮೇ 20ರಿಂದ 2ನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದೇನೆ. ನನ್ನ ಸೇವಾವಧಿಯಲ್ಲಿ ಗುತ್ತಿಗೆದಾರರಿಂದ 5 ಪೈಸೆ ಕಮಿಷನ್ ಪಡೆದಿಲ್ಲ. ನಾನು ಕಮಿಷನ್ ಪಡೆದಿದ್ದೇನೆ ಎಂಬುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ತಿಳಿಸಿದರು. ಬಾಕಿ ಬಿಲ್​ ಪಾವತಿ ಮಾಡಬೇಕೆಂದು ಗುತ್ತಿಗೆದಾರರು ಕೇಳಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೇಲೆ ಆ ಕುರಿತು ನಾಲ್ಕೈದು ಬಾರಿ ಸಭೆ ಮಾಡಿದ್ದೇವೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಬಾಕಿ ಬಿಲ್ ಉಳಿಸಿಕೊಂಡಿರಲಿಲ್ಲ. ಬಿಜೆಪಿ ಕಾಲದಲ್ಲಿ ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು. : - – - -