ಮಂಗಳೂರಿನಲ್ಲಿ ಫೈರಿಂಗ್ ವೇಳೆ ಇಬ್ಬರ ಸಾವು ಕೇಸ್: ಮೃತರ ಕುಟುಂಬಕ್ಕೆ ಸಾಂತ್ವಾನ: ಕೆಪಿಸಿಸಿ ವತಿಯಿಂದ ಪರಿಹಾರ ಚೆಕ್ ವಿತರಿಸಿದ ಸಿದ್ಧರಾಮಯ್ಯ…. ಮಂಗಳೂರು, ಡಿ.23,2019(..): ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ನಡೆಸಿದ ಫೈರಿಂಗ್ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ನಿವಾಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಮಂಗಳೂರಿನಲ್ಲಿ ಗೋಲಿಬಾರ್‌ಗೆ ಬಲಿಯಾದ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಮತ್ತು ನೌಸಿನ್ ನಿವಾಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ವೇಳೆ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಝಮೀರ್ ಅಹ್ಮದ್ ಸಾಥ್ ನೀಡಿದರು. ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ವತಿಯಿಂದ ಮೃತರ ಕುಟುಂಬಕ್ಕೆ ತಲಾ 7.5 ಲಕ್ಷ ರೂ ನ ಚೆಕ್ ವಿತರಣೆ ಮಾಡಲಾಯಿತು. : –- -- - - -