ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ: ಈ ಹೋರಾಟದಲ್ಲಿ ನಾನು ಜೈಲಿಗೆ ಹೋಗಲೂ ಸಿದ್ಧ- ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ.. ಶಿವಮೊಗ್ಗ,ಡಿ,19,2019(..): ಪೌರತ್ವ ಕಾಯ್ದೆ ಜಾರಿ ಕುರಿತು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮುಸ್ಲಿಮರನ್ನು ದೇಶದಿಂದ ಓಡಿಸುವ ಉದ್ದೇಶ ಅವರದ್ದಾಗಿದೆ. ಮುಸ್ಲಿಮರನ್ನು ಓಡಿಸಿ ಇನ್ನೂ ಇಪ್ಪತ್ತು ವರ್ಷಗಳ ಕಾಲ ಆಡಳಿತ ಮಾಡುವ ಹುನ್ನಾರ ಇದೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಧಾನಿ ನರೆಂದ್ರ ಮೋದಿ ಪೌರತ್ವ ಕಾಯ್ದೆಯನ್ನ ತಂದಿದ್ದಾರೆ. ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿಯಬೇಕು. ಕಾಂಗ್ರೆಸ್ ಪಕ್ಷ ಈ ಕಾಯ್ದೆ ವಿರುದ್ದ ಹೋರಾಟ ಮಾಡುತ್ತಿದೆ. ಈ ಹೋರಾಟದಲ್ಲಿ ನಾವು ಜೈಲಿಗೆ ಹೋಗುವುದಕ್ಕೂ ಸಿದ್ದ ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದ ವಿರೋಧಿಸಿ ದೇಶ ಮತ್ತು ರಾಜ್ಯಾದ್ಯಂತ ಉಗ್ರಸ್ವರೂಪದ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆದಿದೆ. : – - - - – .