ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ ಬೆಂಗಳೂರು, ಡಿಸೆಂಬರ್ 19, 2019 (..):ಕೆಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಸಂಬಂಧ ಇಂದು ಬೆಳಗ್ಗೆ ಕೆಎಸ್​​ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯಾಯಾಲಯದ ಮೂಲಕ ಸರ್ಚ್ ವಾರೆಂಟ್ ಪಡೆದು ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ. ಕೆಪಿಎಲ್​ ಫಿಕ್ಸಿಂಗ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಹಲವು ಆಟಗಾರರು, ಕೋಚ್​ಗಳು ಹಾಗೂ ತಂಡದ ಮಾಲೀಕರನ್ನ ಅರೆಸ್ಟ್​ ಮಾಡಿ ವಿಚಾರಣೆ ನಡೆಸಿದೆ. ನಿನ್ನೆ ಸಿಸಿಬಿ ಅಧಿಕಾರಿಗಳು ಬಳ್ಳಾರಿ ಟೀಂ ಮಾಲೀಕ ಅರವಿಂದ್ ರೆಡ್ಡಿಗೆ ಸಮನ್ಸ್​ ನೀಡಿ, ಸುದೀರ್ಘ ವಿಚಾರಣೆ ನಡೆಸಿದ್ದಾರೆ.