ಬಿಜೆಪಿ ಶಾಸಕರೊಬ್ಬರ ಕಾರು ಅಪಘಾತ… ವಿಜಯಪುರ,ಡಿ ,18,2019(..): ಕಲಬುರುಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ. ವಿಜಯ ಪುರ ಜಿಲ್ಲೆಯ ನಿಡಗುಂದ ತಾಲ್ಲೂಕಿನ ಗೊಳಸಂಗಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಶಾಸಕ ಬಸವರಾಜು ಮತ್ತಿಮೂಡ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಬೈಕ್ ಅಡ್ಡಬಂದಿದ್ದು ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - – -