ಶೀಘ್ರವೇ ಸರ್ಕಾರದಿಂದ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಜಾರಿ – ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ… ಬೆಂಗಳೂರು,ಡಿ,17,2019(..): ಶೀಘ್ರವೇ ನಮ್ಮ ಸರ್ಕಾರ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿಯನ್ನು ಜಾರಿಗೊಳಿಸಲಿದೆ. ಇದರಲ್ಲಿ ಹಂತ-2 ಮತ್ತು ಹಂತ-3 ರ ನಗರಗಳತ್ತ ಹಾಗೂ ಶೈಕ್ಷಣಿಕ ಸಂಸ್ಥೆಗಳನ್ನು ಬಲಪಡಿಸುವತ್ತ ಆದ್ಯ ಗಮನ ನೀಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಿದ್ದ “100 ದಿನಗಳ ಉತ್ತಮ ಆಡಳಿತ ಸಂಭ್ರಮದ ಸಮಾರಂಭ” ದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಈ 100 ದಿನಗಳ ಉತ್ತಮ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಏರ್ಪಡಿಸಿದ ಈ ಸಮಾರಂಭದಲ್ಲಿ ಸಂತೋಷದಿಂದ ಪಾಲ್ಗೊಂಡಿದ್ದೇನೆ. ಈ ಹಿಂದಿನ 100 ದಿನಗಳು ಕರ್ನಾಟಕ ಸರ್ಕಾರಕ್ಕೆ ಸವಾಲಿನಿಂದ ಕೂಡಿದ, ದಿನಗಳಾಗಿದ್ದವು. ನೆರೆ ಸಂತ್ರಸ್ತರಿಗಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಬೃಹತ್ ಸವಾಲನ್ನು ನಾವು ಯಶಸ್ವಿಯಾಗಿ ಎದುರಿಸಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು… ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಸಿ. ಎನ್. ಅಶ್ವಥ್ ನಾರಾಯಣ, ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಾದ ಡಾ. ಇ. ವಿ. ರಮಣ ರೆಡ್ಡಿ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪ್ರಶಾಂತ್‍ಕುಮಾರ್ ಮಿಶ್ರಾ, ಆಕ್ಸೆಲ್ ಪಾರ್ಟ್ ನರ್ಸ್ ಸಂಸ್ಥೆಯ ಪಾಲುದಾರರು ಹಾಗೂ ಸ್ಟಾರ್ಟ್ ಅಪ್‍ಗಳ ದಾರ್ಶನಿಕ ಸಮೂಹದ ಅಧ್ಯಕ್ಷರಾದ ಪ್ರಶಾಂತ್ ಪ್ರಕಾಶ್ ಉಪಸ್ಥಿತರಿದ್ದರು. : - - – - .