ನಮ್ಮ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಅಖಿಲ ಕರ್ನಾಟಕ ಹಡಪದ ಸಮಾಜದಿಂದ‌ ಬೃಹತ್ ಪ್ರತಿಭಟನೆ…. ಬೆಂಗಳೂರು,ಡಿ,17,2019(..): ಹಡಪದ (ಕ್ಷೌರಿಕ) ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಹಡಪದ (ಕ್ಷೌರಿಕ) ಸಮಾಜ ಇಂದು ಬೃಹತ್ ಪ್ರತಿಭಟನೆ ನಡೆಸಿತು. ನಗರದ ಟೌನ್ ಹಾಲ್ ಮುಂದೆ ಜಮಾಯಿಸಿದ ಸಾವಿರಾರು ಜನರು ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸಿದರು. ಸಿಎಂ ಯಡಿಯೂರಪ್ಪ, ರಾಜ್ಯಸರ್ಕಾರದ ಮುಂದೆ ಪ್ರತಿಭಟನಾಕಾರರು ಇಟ್ಟಿರುವ ಬೇಡಿಕೆ ಈ ಕೆಳಕಂಡಂತಿದೆ… ಹೀಗೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಹಡಪದ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. : – - – –