ಶಾಸಕ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ಕೇಸ್: ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ…. ರಾಮನಗರ, ಡಿ,14,2019(..): ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಠಾಣಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದ ವೇಳೆ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನಡುವೆ ಗಲಾಟೆ ನಡೆದಿತ್ತು. ಜನವರಿ 16 ರಂದು ಈ ಘಟನೆ ನಡೆದಿತ್ತು. ಗಲಾಟೆ ವೇಳೆ ಶಾಸಕ ಜೆ.ಎನ್ ಗಣೇಶ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಆನಂದ್ ಸಿಂಗ್ ಗಾಯಗೊಂಡು ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದಿದ್ದರು. ಈ ಘಟನೆ ಭಾರಿ ಸುದ್ದಿಯಾಗಿತ್ತು. ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿ ಘಟನೆ ನಡೆದ ಒಂದು ತಿಂಗಳ ಬಳಿಕ ಗಣೇಶ್ ಅವರನ್ನ ಬಂಧಿಸಲಾಗಿತ್ತು. ನಂತರ ಗಣೇಶ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣ ಸಂಬಂಧ ಡಿಸೆಂಬರ್ 9 ರಂದು ಬಿಡದಿ ಠಾಣಾ ಪೊಲೀಸರು 30 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವ ಚಾರ್ಜ್ ಶಿಟ್ ಅನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪರಿಗಣಿಸಿದೆ. : – - --- - – .