ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ನಾಲ್ವರು ಶಂಕಿತರು ಪೊಲೀಸರ ವಶಕ್ಕೆ. ಬೆಂಗಳೂರು, ಮಾರ್ಚ್,2,2024(..):ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿದ್ದು, ಈ ಮಧ್ಯೆ ನಾಲ್ವರು ಶಂಕಿತರನ್ನ ಪೊಲೀಸುರ ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ವಿವಿಧ ತನಿಖಾ ತಂಡಗಳು ರಾತ್ರಿಯಿಡಿ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದ ಬೆಂಗಳೂರಿಗೆ ತೆರಳಿ ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್​, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಿದ್ದಾರೆ. : café- - – - .