ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅಂದರ್… ಮೈಸೂರು,ಡಿ,13,2019(..): ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ. ನಗರದ ಮಂಡಿಮೊಹಲ್ಲಾದ ನಿವಾಸಿ ಸಾಧಿಕ್ ಪಾಷ(26) ಬಂಧಿತ ಆರೋಪಿ. ಈತ ಎಂ.ಕೆ.ಡಿ.ಕೆ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಅರುಣ್ ಎಲ್ ಮತ್ತು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ಬಂಧಿತನಿಂದ 146 ಗ್ರಾಂ ಗಾಂಜಾ ಮತ್ತು ಗಾಂಜಾ ಮಾರಾಟದ ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನರಸಿಂಹ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶಿವಶಂಕರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಇನ್ನ ಆರೋಪಿ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ ಬಿಎಂ ಶ್ರೀ ನಗರದಲ್ಲಿನ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ಮಾಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಮೇಟಗಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೃತಿಕ್ (20) ಬಂಧಿತ ಆರೋಪಿ. ಈತ ಮಾತೃಮಂಡಳಿ ಸರ್ಕಲ್ ವಿನಾಯಕನಗರ ಪಡುವಾರಹಳ್ಳಿ ನಿವಾಸಿಯಾಗಿದ್ದು ಗಾಂಜಾ ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೇಟಗಳ್ಳಿ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಘವೇಂದ್ರ ಬಿ.ಜಿ ಮತ್ತು ಠಾಣೆಯ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿ ಹೃತಿಕ್ ನನ್ನ ಬಂಧಿಸಿದ್ದಾರೆ. ಬಂಧಿತನಿಂದ 50 ಗ್ರಾಂ ಗಾಂಜಾ ಮತ್ತು ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - -