ಮೇಕ್ ಇನ್ ಇಂಡಿಯಾ ಅಲ್ಲ, ರೇಪ್ ಇನ್ ಇಂಡಿಯಾ: ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ: ಲೋಕಸಭೆಯಲ್ಲಿ ಭಾರಿ ಗದ್ದಲ… ನವದೆಹಲಿ,ಡಿ,13,2019(..): ಪ್ರಧಾನಿ ಮೋದಿ ವಿರುದ್ದ ಮಾತನಾಡುತ್ತಾ, ಮೇಕ್ ಇನ್ ಇಂಡಿಯಾ ಅಲ್ಲ. ರೇಪ್ ಇನ್ ಇಂಡಿಯಾ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಲೋಕಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಲೋಕಸಭೆಯಲ್ಲಿ ಬಿಜೆಪಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೇತೃತ್ವದಲ್ಲಿ ಮಹಿಳಾ ಸಂಸದರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ಹಿನ್ನೆಲೆ ಲೋಕಸಭೆಯಲ್ಲಿ ಭಾರಿ ಗದ್ದಲ ಉಂಟಾಗಿದ್ದು, ಲೋಕಸಭೆ ಕಲಾಪವನ್ನ ಸ್ಪೀಕರ್ ಓಂ ಬಿರ್ಲಾ ಅವರು ಮುಂದೂಡಿಕೆ ಮಾಡಿದರು. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಮೇಕ್ ಇನ್ ಇಂಡಿಯಾ ಅಲ್ಲ ರೇಪ್ ಇನ್ ಇಂಡಿಯಾ ಆಗಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದರು. ಈ ಹೇಳಿಕೆಯನ್ನ ಖಂಡಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದು ರಾಹುಲ್ ಗಾಂಧಿ ಕ್ಷಮೆ ಕೋರುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. : - - - –--