ಹೊಸಪೇಟೆ ಉಪಚುನಾವಣೆಯಲ್ಲಿ ಸೋಲು: ಪರಾಮರ್ಶೆ ಸಭೆಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಿರುದ್ದ ‘ಕೈ’ ಕಾರ್ಯಕರ್ತರಿಂದ ಕಿಡಿ.. ಬಳ್ಳಾರಿ,ಡಿ,13,2019(..): ಹೊಸಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾದ ಹಿನ್ನೆಲೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದ ಘಟನೆ ನಡೆದಿದೆ. ಹೊಸಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪರಾಮರ್ಶೆ ಮಾಡಲು ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಮತ್ತು ಜಿಲ್ಲಾಧ್ಯಕ್ಷ ಶಿವಯೋಗಿ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಹೊಸಪೇಟೆಯಲ್ಲಿ ಕಾಂಗ್ರೆಸ್ ಸೋಲಿಗೆ ವಿ.ಎಸ್ ಉಗ್ರಪ್ಪ ಜಿಲ್ಲಾಧ್ಯಕ್ಷ ಶಿವಯೋಗಿಯೇ ನೇರ ಕಾರಣ ಎಂದು ಕೈ ಕಾರ್ಯಕರ್ತರು ಆರೋಪಿಸಿದ್ದಾರೆ. ಹಾಗೆಯೇ ಕೈ ಪರಾಜಿತ ಅಭ್ಯರ್ಥಿ ಘೋರ್ಪಡೆ ವಿರುದ್ದವೂ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ. ಹೊಸಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆನಂದ್ ಸಿಂಗ್ ಗೆಲುವು ಸಾಧಿಸಿದ್ದರು. : -- –-- –- -