ಸಿದ್ದರಾಮಯ್ಯಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ- ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ ಮೈಸೂರು,ಡಿ,11,2019(..): ಮಾಜಿ ಸಿಎಂ ಸಿದ್ದರಾಮಯ್ಯಗೆ ಏನು ಆಗಿಲ್ಲ.ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಅನಾರೋಗ್ಯ ಅಂತ ವದಂತಿ ಹಬ್ಬಿಸಲಾಗಿದೆ ಎಂದು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ ನೀಡಿದರು. ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಸಿದ್ದರಾಮಯ್ಯರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಎಚ್ ಸಿ ಮಹಾದೇವಪ್ಪ, ಸಿದ್ದರಾಮಯ್ಯ ಆರೋಗ್ಯವಾಗಿದ್ದಾರೆ. ಇಂದು ಬೆಳಗ್ಗೆ ಆಸ್ಪತ್ರೆಗೆ ಹೋಗಿದ್ದು ರೊಟೀನ್ ಚೆಕಪ್ ಗೆ ಮಾತ್ರ.ಆಗಾಗ ರೊಟೀನ್ ಚೆಕಪ್ ಗೆ ಅವ್ರು ಆಸ್ಪತ್ರೆಗೆ ಹೋಗ್ತಾರೆ. ಇದರಲ್ಲೇನೂ ವಿಶೇಷತೆ ಇಲ್ಲ ಎಂದರು. ಉಪಚುನಾವಣೆ ಸೋಲಿಗೆ ಸಿದ್ದರಾಮಯ್ಯ ಕಾರಣರಲ್ಲ. ಈ ಉಪಚುನಾವಣೆ ಕ್ಯಾಶ್ ಮತ್ತು‌ ಕಾಸ್ಟ್ ಆಧರಿಸಿ ನಡೆದಿದೆ. ಹಣ, ಜಾತಿ ಪ್ರಯೋಗದಿಂದ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಇದರಿಂದ ಸಿದ್ದರಾಮಯ್ಯಗೆ ಬೇಸರ ಆಗಿದೆ. ಆದ್ರೆ ಉಪಚುನಾವಣೆ ಸೋಲಿಗೆ ಸಿದ್ದರಾಮಯ್ಯ ಕಾರಣರಲ್ಲ. ಸಿದ್ದರಾಮಯ್ಯರಿಂದ ನಮ್ಮ ಅಭ್ಯರ್ಥಿಗಳು ಸೋತಿಲ್ಲ ಆದ್ರೆ ಸಿದ್ದರಾಮಯ್ಯ ಅವರು ನೈತಿಕತೆ ಹೊತ್ತು ರಾಜೀನಾಮೆ ಕೊಟ್ಟಿದ್ದಾರೆ ಈ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಿದ್ಧರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಡಿಕೆಶಿಗೆ ಹೈಕಮಾಂಡ್ ಬುಲಾವ್ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. : – – - - -