ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ. ಬೆಂಗಳೂರು,ಮಾರ್ಚ್,1,2024(..):ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಿರುದ್ಧ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸ್ ಹಾಕಿದ್ದು, ಈ ಸಂಬಂಧ ಎಂ. ಲಕ್ಷ್ಮಣ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ಲತಾ. ಜೆ ಆದೇಶಿಸಿದ್ದಾರೆ. ಹಾಗೆಯೇ ಜೂನ್ 12 ರಂದು ಖುದ್ದು ಹಾಜರಾಗುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರು ಮೈಸೂರು ಹೆದ್ದಾರಿ ಕುರಿತು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನಹಾನಿಕರ ಹೇಳಿಕೆ ಹಾಗೂ ಸಂಸತ್ ನಲ್ಲಿ ಹೊಗೆ ಬಾಂಬ್ ಸ್ಪೋಟದ ಬಗ್ಗೆ ಸೇರಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹಲವು ಆರೋಪ ಮಾಡಿದ್ದರು. ಸಾಕ್ಷಿಯಾಗಿ ಪೆನ್ ಡ್ರೈವ್ ಇರುವುದಾಗಿ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸ್ ದಾಖಲಿಸಿದ್ದರು. : - .- – –