ಆಂಧ್ರದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಕೃತ್ಯ ಬೆಳಕಿಗೆ: ಇಬ್ಬರು ಆರೋಪಿಗಳು ಅರೆಸ್ಟ್…. ಆಂಧ್ರ ಪ್ರದೇಶ,ಡಿ,8,2019(..): ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಸಮೀಪದ ತಿರುಚನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಇಬ್ಬರು ಕಾಮುಕರು ಲಿಫ್ಟ್ ಕೊಡುವುದಾಗಿ ನಂಬಿಸಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬ ಇಬ್ಬರು ಆರೋಪಿಗಳನ್ನ ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಜಮೋಹನ ನಾಯಕ ರೌಡಿಶೀಟರ್ ಆಗಿದ್ದಾನೆ ಎನ್ನಲಾಗಿದೆ. : - –- –