ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು… ಮೈಸೂರು,ಡಿ,7,2019(..): ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೇವಾಡಿ ಗ್ರಾಮದ ರಘು ಮೃತ ಪಟ್ಟವರು. ವಡ್ಡಂಬಾಳು ಗ್ರಾಮದ ಎದುರುಗಡೆಯಿಂದ ಬಂದು ಬೈಕ್‌ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -- – - - - .