ಅನರ್ಹರು, ಬಿಜೆಪಿ ವಿರುದ್ಧ ಜಾರ್ಜ್ ಶೀಟ್ ಬಿಡುಗಡೆ ಮಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ: ಮಾಡಿರುವ ಆರೋಪಗಳೇನು ಗೊತ್ತೆ…? ಬೆಂಗಳೂರು,ಡಿ,4,2019(..): ನಾಳೆ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನವಿದ್ದು ಇದಕ್ಕೂ ಮುನ್ನ ಅನರ್ಹರು, ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಜಾರ್ಜ್ ಶೀಟ್ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ, ನನ್ನ ನೇತೃತ್ವದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಕೂಡಲೇ ಅತೃಪ್ತಗೊಂಡಿದ್ದ ಬಿಜೆಪಿ, ಅಧಿಕಾರದ ಹುಚ್ಚು ಹಿಡಿಸಿಕೊಂಡು ಕೂಗುಮಾರಿಯಾಂತಾಗಿತ್ತು. ನಾನು ಮಾಡದ ತಪ್ಪುಗಳಿಗೆ ನನ್ನನ್ನು ಬಿಗಿಯುತ್ತಾ, ಆಡಳಿತ ಮಾಡಲು ಬಿಡದ ಬಿಜೆಪಿ ಅನರ್ಹರ ಅಕ್ರಮ ಸಂಬಂಧದೊಂದಿಗೆ ಅನೈತಿಕ ಸರ್ಕಾರ ರಚಿಸಿ ಈಗ ರಾಜ್ಯವನ್ನು ಅನಾಹುತದ ಹಾದಿಯಲ್ಲಿ ಕರೆದೊಯ್ಯುತ್ತಿದೆ. ಈ ಮೂಲಕ ದೇಶದಲ್ಲೆ ಕೆಟ್ಟ ಸಂಪ್ರದಾಯವೊಂದಕ್ಕೆ ರಾಜ್ಯ ಮಾದರಿಯಾಗುತ್ತಿದೆ ಎಂದಿದ್ದಾರೆ ಬಿಜೆಪಿ ಮತ್ತು ಅನರ್ಹರ ವಿರುದ್ಧದ ಆರೋಪ ಪಟ್ಟಿ ಇದು…. : - - – –- .