ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಬಿಗ್ ರಿಲೀಫ್: ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್… ನವದೆಹಲಿ,ಡಿ,4,2019(..): ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಪಿ.ಚಿದಂಬರಂಗೆ ಬಿಗ್ ರಿಲೀಫ್ ಸಿಕ್ಕಿದ್ದು 106 ದಿನಗಳ ಜೈಲುವಾಸ ಅಂತ್ಯವಾಗಿದೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಆರ್ ಭಾನುಮತಿ ನೇತೃತ್ವದ ತ್ರಿಸದಸ್ಯಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ ನೀಡಬೇಕು 2 ಲಕ್ಷ ಠೇವಣಿ ನೀಡಬೇಕು. ಅಧಿಕಾರಿಗಳ ವಿಚಾರಣೆಗೆ ಸಹಕರಿಸಬೇಕು. ಪಾಸ್ ಪೂರ್ಟ್ ವಶಕ್ಕೆ ನೀಡುವಂತೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ. ಹಾಗೆಯೇ ಸಾರ್ವಜನಿಕ ಹೇಳಿಕೆ, ಸಂದರ್ಶನ ನೀಡದಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಐಎನ್‌ಎಕ್ಸ್‌ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 16ರಂದು ಪಿ.ಚಿದಂಬರಂ ಅವರನ್ನ ಬಂಧಿಸಲಾಗಿತ್ತು.ಜಾಮೀನು ನೀಡುವಂತೆ ಪಿ. ಚಿದಂಬರಂ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. : - - - - .